ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಅನಾರೋಗ್ಯ ಪೀಡಿತ ಯುವಕ ಹೃದಯಾಘಾತದಿಂದ ಸಾವು.

ಕರಾವಳಿ

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಅವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟ ಯುವಕ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.