ಕರ್ನಾಟಕ ಸರಕಾರವು ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಗೊಂಡಿತ್ತು.
ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿಯ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಜಿಲ್ಲೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆ ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನಕ್ಕೆ ಆಯ್ಕೆಯಾಗಿದೆ. ನವೆಂಬರ್ 26 ರಂದು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿ ಯವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.