ನಟೋರಿಯಸ್ ಕಿರಾತಕ ಮಾಣಿ ರಫೀಕ್ ಬಂಟ್ವಾಳ ಪೊಲೀಸರ ಬಲೆಗೆ..
ನಾಲ್ಕು ಮದುವೆಯಾಗಿ ತ್ರಿವಳಿ ತಲಾಖ್ ನೀಡಿ ಆಕೆಯ ಮೇಲೆ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದಲ್ಲದೇ ಐದನೇ ಮದುವೆಗೆ ತಯಾರಿ ನಡೆಸುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ.
ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದ ರಾಕ್ಷಸೀಯ ಕೃತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದನ್ನೇ ಕಸುಬಾಗಿಸಿಕೊಂಡ ನಟೋರಿಯಸ್ ಬಹುಪತ್ನಿ ವಲ್ಲಭನನ್ನು ಮಾಣಿ ರಫೀಕ್ ಯಾನೆ ಮಹಮ್ಮದ್ ರಫೀಕ್(42)ನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ.
ಆರೋಪಿ ಮಾಣಿ ರಫೀಕ್ ಈಗಾಗಲೇ ನಾಲ್ಕು ಮದುವೆಯಾಗಿದ್ದು, ಒಂದೆರಡು ವರ್ಷ ಜೊತೆಯಾಗಿ ಜೀವನ ಮಾಡಿ ಮಕ್ಕಳನ್ನು ಕರುಣಿಸಿದ ಬಳಿಕ ವಿಚ್ಚೇದನ ನೀಡಿ ಪರಾರಿಯಾಗುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಲ್ಕನೇ ಪತ್ನಿಯಿಂದ ದೂರು
ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ ಆರೋಪಿಯಾದ ಗಂಡ ಮೊಹಮ್ಮದ್ ರಫೀಕ್ ನ ಮನೆಗೆ ನಾನು ಹೋಗಿದ್ದೇನೆ. ಹೋದಂತ ಸಂದರ್ಭದಲ್ಲಿ ಆರೋಪಿಯಾದ ರಫೀಕ್ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಲ್ಲದೇ ಮಗುವನ್ನು ಕೊಂದು ಹಾಕುತ್ತೇನೆಂದು ಬೆದರಿಕೆ ಹಾಕಿಧ್ದಲ್ಲದೇ ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಿಗಿದ್ದಾನೆಂದು ಸಂತ್ರಸ್ತ ಪತ್ನಿ ಆರೋಪಿಸಿದ್ದಾಳೆ. ಅಲ್ಲದೇ ತ್ರಿವಳಿ ತಲಾಖ್ ಎಂದು ಹೇಳಿ ಮನೆಯಿಂದ ಕುತ್ತಿಗೆಗೆ ಕೈಹಾಕಿ ಮನೆಯಿಂದ ಹೊರಗೆ ದಬ್ಬಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನೂ ಕಿತ್ತುಕೊಂಡಿರುವ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ.
ಯಾರೀತ ಮಾಣಿ ರಫೀಕ್.?
ಮಾಣಿ ರಫೀಕ್ ಯಾನೆ ಬಾರ್ಬಿ ರಫೀಕ್ ಯಾನೆ ಮಹಮ್ಮದ್ ರಫೀಕ್ ನಟೋರಿಯಸ್ ಕಿರಾತಕ. ಮಾಣಿಯಿಂದ ವಲಸೆ ಬಂದ ರಫೀಕ್ ವಿಟ್ಲ ಸಮೀಪದ ಮಂಗಲಪದವು ಎಂಬಲ್ಲಿ ಮನೆ ಕಟ್ಟಿಕೊಂಡಿದ್ದ. ಅಲ್ಲಿಯೂ ನೆರೆಹೊರೆಯವರ ಜೊತೆ ಗಲಾಟೆ, ಗದ್ದಲ ಎಬ್ಬಿಸಿ ಕೊನೆಗೆ ಮನೆ ಮಾರಾಟ ಮಾಡಿ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲೂ ಕೂಡಾ ಪರಿಸರದ ಶಾಂತಿಪ್ರಿಯ ನಿವಾಸಿಗಳ ಜೊತೆ ತಕರಾರು ಎಬ್ಬಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಎರಡು ವರ್ಷಗಳ ಹಿಂದೆ ತನಗೆ ಜನ್ಮ ನೀಡಿದ ಮಹಾತಾಯಿಯ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿ ಆಕೆಯ ಚಿನ್ನಾಭರಣ ಕಿತ್ತು ಕಾಲಿನಿಂದ ತುಳಿದು ಮನೆಯಿಂದ ಹೊರದಬ್ಬಿ ರಾಕ್ಷಸೀಯ ಕೃತ್ಯ ನಡೆಸಿದ್ದ. ಈತನ ಹಲ್ಲೆ, ಕಿರುಕುಳದಿಂದ ಮನನೊಂದ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಲ್ಲದೇ ಠಾಣೆಯಲ್ಲೂ ಹೆತ್ತ ತಾಯಿಯ ಮೇಲೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ರಾಕ್ಷಸೀ ಕೃತ್ಯ ನಡೆಸಿರುವುದು ಪ್ರತಿಯೊಬ್ಬನಿಗೂ ತಿಳಿದ ವಿಚಾರವಾಗಿದೆ. ಅದಾದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಮೊದಲ ಪತ್ನಿಯ ಹಿರಿಮಗಳ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ. ಇದೀಗ ಆಕೆಯೂ ತನ್ನ ಅಜ್ಜಿ ಜೊತೆ ಮಂಗಲಪದವು ಬಳಿ ಬಾಡಿಗೆ ಮನೆಯಲ್ಲಿದ್ದಾರೆ.
ಇದೀಗ ನಾಲ್ಕನೇ ಪತ್ನಿಯ ಚಿನ್ನಾಭರಣವನ್ನೆಲ್ಲಾ ಕಿತ್ತುಕೊಂಡು ಬಳಿಕ ಆಕೆಯ ಮಗುವಿನ ಮೇಲೆ ಹಲ್ಲೆ ನಡೆಸಿ ಹೊರದಬ್ಬಿದ್ದ ಕಿರಾತಕನ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಸೆಕ್ಷನ್ BNS/-85,86,352,351(1),115(2) ರಲ್ಲಿ ಪ್ರಕರಣ ದಾಖಲಾಗಿದೆ.