ದೂರು ನೀಡಲು ಬಂದ ಮಹಿಳೆಗೆ ಡಿವೈಎಸ್ಪಿಯಿಂದ ಲೈಂಗಿಕ ದೌರ್ಜನ್ಯ; ವೀಡಿಯೊ ವೈರಲ್

ರಾಜ್ಯ

ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈಎಸ್ಪಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಎಂಬುವವರು ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆಯೊಬ್ಬರು ಅವರ ಕಚೇರಿಗೆ ಬಂದಿದ್ದರು. ಈ ವೇಳೆ ಕಚೇರಿಯ ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅನೈತಿಕ ಚಟುವಟಿಕೆ ನಡೆಸಿದ್ದಾರೆ ಎನ್ನಲಾಗಿದೆ.

ಡಿವೈಎಸ್ಪಿ ರಾಮಚಂದ್ರಪ್ಪನವರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವಿಡಿಯೋವೊಂದನ್ನು ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಇದೀಗ ಅಧಿಕಾರಿಯ ರಾಸಲೀಲೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.