ಜೆಡಿಎಸ್ ಶಾಸಕ ಶಿವಲಿಂಗೇಗೌಡ ಶ್ರೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

ರಾಜ್ಯ

ಫೆಬ್ರವರಿ 3 ರಂದು ಅರಸೀಕೆರೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಆಯೋಜಿಸುವ ಮೂಲಕ ಅರಸೀಕೆರೆ ಹಾಲಿ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ದೊಡ್ಡ ಹೊಡೆತ ನೀಡಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯ ಗುರಿ ಹೊಂದಿರುವ ಜೆಡಿಎಸ್ ನಾಯಕರಿಗೆ ಈ ಸಮಾವೇಶ ಮಹತ್ವದ್ದಾಗಿದೆ. ಲಿಂಗಾಯತ ಪ್ರಾಬಲ್ಯದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಪಡೆದು ಮೂರು ಅವಧಿಗೆ ಗೆದ್ದಿರುವ ಶಿವಲಿಂಗೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸಿದರೆ ಸೋಲುತ್ತೇನೆ ಎಂದು ಶಿವಲಿಂಗೇಗೌಡ ತಮ್ಮ ಬೆಂಬಲಿಗರೊಬ್ಬರಿಗೆ ತಿಳಿಸಿದ್ದಾರೆ. ಜೆಡಿಎಸ್ ನಾಯಕರ ವರ್ತನೆಯಿಂದ ಹತಾಶರಾಗಿರುವ ಶಿವಲಿಂಗೇಗೌಡ ಒಂದೆರಡು ತಿಂಗಳಿಂದ ಜೆಡಿಎಸ್ ನಾಯಕರ ಜೊತೆ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.