ಕರ್ನಾಟಕದ ಹದಿನೈದನೇ ಶಾಸಕಾಂಗದ ಅವಧಿ ಮೇ 24 ರಂದು ಕೊನೆಗೊಳ್ಳಲಿದ್ದು, ಎಲ್ಲಾ 224 ಸದಸ್ಯರನ್ನು ಆಯ್ಕೆ ಮಾಡಲು ಮೇ 2023 ರ ಮೊದಲು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಅದರ ನಡುವೆ ಹಲವಾರು ಚುನಾವಣೋತ್ತರ ಸಮೀಕ್ಷೆ ನೀಡಿವೆ. ಅವುಗಳಲ್ಲಿ ಲೋಕ್ ಪೋಲ್ ಸಮೀಕ್ಷೆಯು ತನ್ನ ವರದಿ ಬಿಡುಗಡೆ ಮಾಡಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಲಿದೆ ಎಂದು ಲೋಕ್ಪೋಲ್ ಸಮೀಕ್ಷೆ ಹೇಳಿದೆ. ಇದರಿಂದಾಗಿ ಆಡಳಿತರೂಢ ಬಿಜೆಪಿಗೆ ಆಘಾತವಾಗುವ ಸಾಧ್ಯತೆಯಿದೆ. ಲೋಕ್ಪೋಲ್ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 116 ರಿಂದ 122 ಸ್ಥಾನಗಳು ಸಿಗಬಹುದು ಎಂದು ಅಂದಾಜಿಸಲಾಗಿದ್ದು, ಈ ಸಮೀಕ್ಷೆಯನ್ನು ಆಧರಿಸಿಯೇ ಕಾಂಗ್ರೆಸ್ ಚುನಾವಣಾ ತಂತ್ರಗಾರಿಕೆಯನ್ನ ರೂಪಿಸುತ್ತಿದೆ ಎಂದು ಹೇಳಲಾಗಿದೆ.
ಆಡಳಿತರೂಢ ಬಿಜೆಪಿ ಪಕ್ಷ 140 ಕ್ಕೂ ಸ್ಥಾನಗಳನ್ನ ಗೆಲ್ಲುವ ವಿಶ್ವಾಸ ಇಟ್ಟುಕೊಂಡಿತ್ತು, ಆದರೆ, ಲೋಕ್ಪೋಲ್ ಸಮೀಕ್ಷೆಯಿಂದ ಭಾರೀ ಆಘಾತ ಉಂಟು ಮಾಡಿದೆ. ಸಮೀಕ್ಷೆಯ ಪ್ರಕಾರ ಬಿಜೆಪಿಗೆ 77 ರಿಂದ 83 ಸ್ಥಾನಗಳು ಸಿಕ್ಕರೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಗೆ 21 ರಿಂದ 27 ಸ್ಥಾನಗಳು ಸಿಗಬಹುದು ಎಂದು ಸರ್ವೇಯಲ್ಲಿ ಅಂದಾಜಿಸಲಾಗಿದೆ.
ಪಕ್ಷೇತರರು ಸಣ್ಣ ಗೆಲುವು ಸಾಧಿಸಬಹುದು.ಬಿಜೆಪಿಗೆ ಶೇ 33 ರಿಂದ 36 ರಷ್ಟು ಮತಗಳು ಚಲಾವಣೆ ಆದರೆ ಕಾಂಗ್ರೆಸ್ಗೆ ಶೇ 39 ರಿಂದ 42 ರಷ್ಟು ಪ್ರಮಾಣದಲ್ಲಿ ಮತ ಸಿಗಬಹುದು. ಇನ್ನು ಜೆಡಿಎಸ್ಗೆ ಶೇ 15 ರಿಂದ 18 ರಷ್ಟು ಮತ ಪಡೆಯಬಹುದು ಎಂದು ಅಂದಾಜಿಸಲಾಗಿದೆ.
