ಡೆಂಗ್ಯೂ ಜ್ವರದಿಂದಾಗಿ ಬಿಳಿ ರಕ್ತ ಕಣಗಳ ಕುಸಿತ ಉಂಟಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವರು ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಮೃತಪಟ್ಟ ವಿದ್ಯಾರ್ಥಿನಿ.
ಜ್ಯೋತಿನಗರದ ನಿವಾಸಿ,ಮಯ್ಯದ್ದಿ -ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು. ಕೆಲವು ದಿನಗಳಿಂದ ಆಕೆ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಸಮಸ್ಯೆ ಉಲ್ಬಣಿಸಿ ರವಿವಾರ ರಾತ್ರಿ ನಿಧನ ಹೊಂದಿದ್ದಾರೆ.
