ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯ

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ 2019 ರಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣದಲ್ಲಿ ಗುಜರಾತ್ ನ ಸೂರತ್ ನ್ಯಾಯಾಲಯ ರಾಹುಲ್’ಗೆ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ರಾಹುಲ್ ಗಾಂಧಿಗೆ 30 ದಿನಗಳ ಜಾಮೀನು ನೀಡಲಾಗಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿ ಶಾಸಕ ಮತ್ತು ಗುಜರಾತ್’ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿತ್ತು. ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೇಗೆ ಹೊಂದಿದ್ದಾರೆ.? 2019ರಲ್ಲಿ ಕೋಲಾರದಲ್ಲಿ ಏರ್ಪಡಿಸಿದ್ದ ರಾಲಿಯನ್ನುದ್ದೇಶಿಸಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದರು.