ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಕಾಸರಗೋಡು ಮೂಲದ ಚೆರ್ಕಳಂ ನಿವಾಸಿ ಅಬ್ದುಲ್ಲಾ ಎಂಬಾತನನ್ನು ಬಂಧಿಸಿದ್ದಾರೆಆರೋಪಿಯಿಂದ 7.50 ಲಕ್ಷ ಮೌಲ್ಯದ 150 ಗ್ರಾಂ ಎಂಡಿಎಂಎ, ಮಾದಕ ವಸ್ತು,ಬ್ರೀಝಾ ಕಾರು, ಮೊಬೈಲ್, 1260 ರೂಪಾಯಿ ನಗದು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡಲು ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಎಸಿಪಿ ಪಿ.ಎ ಹೆಗ್ಡೆ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಈ ಹಿಂದೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 45 ಕೆಜಿ ಗಾಂಜಾ ಸಾಗಾಟ ಪ್ರಕರಣ, ಕಾಸರಗೋಡು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳು ಭಾಗವಹಿಸಿದ್ದರು.