ಲೈಂಗಿಕ ಕಿರುಕುಳ ಪ್ರಕರಣ: ಕುಸ್ತಿ ಪ್ರಾಧಿಕಾರದ ಅಧ್ಯಕ್ಷ, ಬಿಜೆಪಿ ಸಂಸದ, ಭೂಷಣ್ ಶರಣ್ ಸಿಂಗ್ ರನ್ನು ಬಂಧನಕ್ಕಾಗಿ ಪ್ರತಿಭಟನೆ: ಕುಸ್ತಿಪಟುಗಳು

ರಾಷ್ಟ್ರೀಯ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಘೋಷಿಸಿದ್ದಾರೆ. ಕುಸ್ತಿಪಟುಗಳ ಪ್ರತಿಭಟನೆಗೆ ಮಣಿದು ಈಗಾಗಲೇ ಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೂ ತಮಗೆ ದೆಹಲಿ ಪೊಲೀಸರ ಮೇಲೆ ತಮಗೆ ನಂಬಿಕೆ ಇಲ್ಲ. ಹೀಗಾಗಿ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ನಮ್ಮ ಹೋರಾಟ ಬ್ರಿಜ್ ಭೂಷಣ್ ಸಿಂಗ್ ಅವರಂತಹವರನ್ನು ಶಿಕ್ಷೆಗೆ ಗುರಿಪಡಿಸುವುದು ಮತ್ತು ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ಕುಸ್ತಿಪಟುಗಳು ಹೇಳಿದ್ದಾರೆ.ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಶುಕ್ರವಾರ ಎಫ್‌ಐಆರ್ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ತಿಳಿಸಿದ ನಂತರ ಕ್ರೀಡಾಪಟುಗಳಿಂದ ಈ ಪ್ರತಿಕ್ರಿಯೆ ಬಂದಿದೆ.ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇರೆಗೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಮೊದಲ ಎಫ್‌ಐಆರ್ ಅನ್ನು ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ್ದು, ಇದನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ.ಎರಡನೇ ಎಫ್‌ಐಆರ್ ಅನ್ನು ವಯಸ್ಕ ಕುಸ್ತಿಪಟುಗಳು ನೀಡಿದ ದೂರಿನ ಆಧಾರದ ಮೇಲೆ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ