ಜಿಲ್ಲೆಯಲ್ಲಿ ಮತ್ತೆ ಮರುಕಳಿಸಿದ ಅನೈತಿಕ ಪೊಲೀಸ್‌ಗಿರಿ, ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ

ಕರಾವಳಿ

ಪುತ್ತೂರಿನಲ್ಲಿ ಅನ್ಯ ಧರ್ಮದ ಸಹಪಾಠಿ ವಿದ್ಯಾರ್ಥಿನಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಕೋಮುವಾದಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಮೊಹಮ್ಮದ್ ಫಾರಿಸ್ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ.ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುತ್ತೂರು ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಫಾರಿಸ್ ಮತ್ತು ಆತನ ಕಾಲೇಜು ಸಹಪಾಠಿಗಳು ಜ್ಯೂಸ್ ಕುಡಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳೀಯ ಆಟೋ ಚಾಲಕ ಮತ್ತು ಅವನ ಸ್ನೇಹಿತರು ಅನ್ಯ ಧರ್ಮದ ಸಹಪಾಠಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ್ದಕ್ಕಾಗಿ ಫಾರಿಸ್ ಅವರನ್ನು ಥಳಿಸಿದ್ದಾರೆ.

ತಕ್ಷಣ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಾಠೆ ತಿಳಿಸಿದ್ದಾರೆ. ಆರೋಪಿಗಳು ಯಾವುದಾದರೂ ಹಿಂದುತ್ವ ಸಂಘಟನೆಗೆ ಸೇರಿದವರಾ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.