ನಾಡಹಬ್ಬ ದಸರಾ ಜಂಬೂ ಸವಾರಿಯಲ್ಲಿ 13 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಹೆಗ್ಗಳಿಕೆಯ ಬಲರಾಮ ಆನೆ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ.ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿರುವ ಕೆಲವು ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ. ಆನೆಯ ಗಂಟಲಿನಲ್ಲಿ ಹುಣ್ಣಾಗಿದ್ದು, ಆಹಾರ ನಿರಾಕರಿಸುತ್ತಿರುವುದರಿಂದ ನಿತ್ರಾಣಗೊಂಡಿದೆ.

ಎಂಡೋಸ್ಕೋಪಿ ಮಾಡಿ ರಕ್ತ ಹಾಗೂ ಅಂಗಾಂಗದ ಮಾದರಿಯನ್ನು ಪರೀಕ್ಷೆಗಾಗಿ ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ತಜ್ಞ ವೈದ್ಯರಿಂದ ಎಲ್ಲ ರೀತಿಯಿಂದಲೂ ಚಿಕಿತ್ಸೆ ನೀಡಲಾಗಿತ್ತು. ಉತ್ತಮವಾಗಿ ಸ್ಪಂದಿಸುತ್ತಿತ್ತು. ಆದರೆ, ಭಾನುವಾರ ಸಂಜೆ ಮೃತಪಟ್ಟಿದೆ.ಕಳೇಬರದ ಅಂತ್ಯಕ್ರಿಯೆಯನ್ನು ಸೋಮವಾರ ಬೆಳಿಗ್ಗೆ 11ರ ಸುಮಾರಿಗೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.