ಬಿಜೆಪಿಗೆ ಮತ ಹಾಕದಂತೆ ಮತದಾರರಿಗೆ ಮಮತಾ ಬ್ಯಾನರ್ಜಿ ಮನವಿ

ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತೆ ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಿ,ಬಿಜೆಪಿಗೆ ಮತ ಚಲಾಯಿಸಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತೆ ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಿ,ಬಿಜೆಪಿಗೆ ಮತ ಚಲಾಯಿಸಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ.ಟಿಎಂಸಿ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರೂ ಕರ್ನಾಟಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ, ಕಾಂಗ್ರೆಸ್ ಅಥವಾ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.

ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು,ಬಿಜೆಪಿ ಆದಷ್ಟು ಬೇಗ ತೊಲಗಿದರೆ ಒಳ್ಳೆಯದು,ಮತಗಳ ವಿಭಜನೆಯಿಂದ ಈ ಕೆಲಸ ಆಗದು, ಕರ್ನಾಟಕದಿಂದಲೇ ಬಿಜೆಪಿ ಕುಸಿತವಾದರೆ ತುಂಬಾ ಖುಷಿಯಾಗುತ್ತದೆ. ನಾವು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಆದರೆ, ಪ್ರತಿಯೊಂದು ಮತವೂ ಪ್ರಮುಖವಾಗಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ ಎಂದರು