ಪಿತ್ತಜನಕಾಂಗದ ಸಮಸ್ಯೆಯಿಂದಾಗಿ ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೂಪೇಶ್ ಪೂಜಾರಿ ಎಂಬ ಯುವಕ ಭಾನುವಾರ ಮೃತಪಟ್ಟಿದ್ದಾರೆ. ಅವರ ಸಾವಿಗೆ ಸರಕಾರಿ ವೆನ್ಲಾಕ್ ಅಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಹಿಂದೂ ಪರ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ. ಮೃತ ಯುವಕನ ಪಾರ್ಥಿವ ಶವವನ್ನು ವೆನ್ಲಾಕ್ ಆಸ್ಪತ್ರೆಯ ಹೊರಗಡೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಮಣಿನಾಲ್ಕೂರು ಗ್ರಾಮದ ನಿವಾಸಿ ರೂಪೇಶ್ ಪೂಜಾರಿಯವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಕಾರಣ ಅವರನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಭಾನುವಾರ ಅವರು ಮೃತ ಪಟ್ಟರು.
ರೂಪೇಶ್ ಪೂಜಾರಿ ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದು, ಅವಿವಾಹಿತರಾಗಿದ್ದರು.ಹಿಂದೂ ಪರ ಸಂಘಟನೆಗಳ ವಿವಿಧ ಸಂಘಟನೆಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದರು.