ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್‌ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು.
1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಇವರು ರಘುಪತಿ ಭಟ್ ವಿರುದ್ಧ ಪರಾಜಯಗೊಂಡರು. ಅಲ್ಲದೆ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಾಜಿ ಲೋಕಸಭಾ ಸದಸ್ಯ ದಿವಂಗತ ರಂಗನಾಥ ಶೆಣೈಯವರ ಕಾಲದಿಂದ ಸಣ್ಣ ವಯಸ್ಸಿನಿಂದಲೇ ಕಾಂಗ್ರೆಸ್ ಪರ ಸೈಕಲ್ ನಲ್ಲೇ ಓಡಾಡಿ ಪ್ರಚಾರ,ಯುವ ಕಾಂಗ್ರೆಸ್ ನ ನಾಯಕತ್ವ,ಓಸ್ಕರಣ್ಣನ ಚುನಾವಣೆಗಳಲ್ಲಿ ಹೋರಾಟ ಹೀಗೆ ಬೆಳೆಯುತ್ತಾ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಮನೋರಮಾ ಮಧ್ವರಾಜ್ ರವರಿಗೇನೆ ಪ್ರತಿಬಾರಿ ಟಿಕೆಟ್ ಸಿಕ್ಕಿದಾಗ ಅದು ನ್ಯಾಯೋಚಿತವಾಗಿ ತನಗೆ ಸಿಗಬೇಕಿತ್ತು ಎಂಬ ಆಕ್ರೋಶದಿಂದ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದರು ,ಅತ್ಯಂತ ಅಲ್ಪ ಅಂತರದಿಂದ ಸೋಲಾಯಿತು, ನಂತರದ ಚುನಾವಣೆಯಲ್ಲಿ ಎಸ್ ಬಂಗಾರಪ್ಪರವರ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮನೋರಮಾರನ್ನು ಸೋಲಿಸಿದರು,ಆಮೇಲೆ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನವಾದಾಗ ಮತ್ತೆ ಕಾಂಗ್ರೆಸ್ ಗೆ ಬಂದರು, ನಂತರದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿ ಗೆದ್ದರು,