ರಾಷ್ಟ್ರೀಯ ವೈದ್ಯಕೀಯ ಆಯೋಗ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಸರಿ-ಸುಮಾರು 40ಕ್ಕೂ ಮಿಕ್ಕ ವೈದ್ಯಕೀಯ ಕಾಲೇಜುಗಳು ಮಾನ್ಯತೆಯನ್ನು ರದ್ದು ಪಡಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಮೂಲಗಳ ಪ್ರಕಾರ, ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ನಿಗದಿಪಡಿಸಿದ ಮಾನದಂಡಗಳ ಪಾಲನೆಯಲ್ಲಿ ಲೋಪದೋಷ ಕಂಡುಬಂದ ಹಿನ್ನಲೆಯಲ್ಲಿ ದೇಶಾದ್ಯಂತ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ. ಅಲ್ಲದೆ ಇನ್ನೂ 100 ಕ್ಕೂ ಮಿಕ್ಕ ವೈದ್ಯಕೀಯ ಕಾಲೇಜುಗಳು ಎನ್‌ಎಂಸಿಯ ಮಾನದಂಡಗಳನ್ನು ಅನುಸರಿಸದ ಕಾರಣ ಮಾನ್ಯತೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಸುಮಾರು 100 ವರ್ಷಗಳಷ್ಟು ಹಳೆಯದಾದ ಅರುಣಾಚಲ ಪ್ರದೇಶದ ಪ್ರಮುಖ ವೈದ್ಯಕೀಯ ಕಾಲೇಜು ಸಂಸ್ಥೆ ಕೂಡ ಮಾನ್ಯತೆ ಕಳೆದುಕೊಂಡಿದೆ. ಈ ಸಂಸ್ಥೆಗಳು ಮಾನದಂಡಗಳನ್ನು ಅನುಸರಿಸದಿರುವುದು ಮತ್ತು ಅಧ್ಯಾಪಕರು ಮತ್ತು ಭದ್ರತಾ ಕ್ಯಾಮೆರಾಗಳಿಗೆ ಸಂಬಂಧಿಸಿದ ಲೋಪಗಳ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕೆಲವು ವೈದ್ಯರು ಎನ್‌ಎಂಸಿ ತೆಗೆದುಕೊಂಡ ಕ್ರಮದ ಕುರಿತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಮಾನದಂಡಗಳನ್ನು ಅನುಸರಿಸದಿರುವುದು ಈ ಸಂಸ್ಥೆಗಳ ಇತರ ಲೋಪಗಳಾಗಿವೆ. ತಮ್ಮ ಪತ್ರದಲ್ಲಿ, ವೈದ್ಯರು ಈ ಕ್ರಮವು ತಮ್ಮ ವೃತ್ತಿಜೀವನದ ಮೇಲೆ ಪರಿಣಾಮ ಬೀರಬಹುದು ಮತ್ತು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳಬಹುದು ಎಂಬ ಭಯವನ್ನು ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 2014 ರಲ್ಲಿ 387 ರಿಂದ ಪ್ರಸ್ತುತ 654 ಕ್ಕೆ ಏರಿದೆ, ಇದು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಎಂಬಿಬಿಎಸ್ ಸೀಟುಗಳ ಸಂಖ್ಯೆಯೂ ಶೇ.94ರಷ್ಟು ಏರಿಕೆ ಕಂಡಿದೆ.