ಭ್ರಷ್ಟ ಅಧಿಕಾರಿಗಳ ಅಮಾನತಿಗೆ ಡಿಸಿಎಂ, ಡಿ.ಕೆ.ಶಿವಕುಮಾರ್ ಆದೇಶ

ರಾಜ್ಯ

ಬೆಂಗಳೂರು:ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿ,ಅನುಷ್ಠಾನಕ್ಕೆ ತಂದ ಎಲ್ಲಾ ಅಧಿಕಾರಿಗಳನ್ನು,ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದಾರೆ..

ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು.? ಯಾತಕ್ಕಾಕಗಿ ಇದನ್ನು ಮಾಡಿದಿರಿ.? ಯಾರಿಗೆ ಅನುಕೂಲ ಮಾಡಿಕೊಡಲು ಈ ಕೆಲಸ ಮಾಡಿದಿರಿ.? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದರು.

ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡ ಬಡಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆಯನ್ನು ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.

ಹಿಂದಿನ ಸರ್ಕಾರದ ಕೆರೆ ಒಡೆಯುವ ಹಾಗೂ ಸರ್ಕಾರ ಭೂಮಿಯನ್ನು ಬಂಡವಾಳ ಶಾಹಿಗಳ ಪರ ಉಪಯೋಗಿಸಲು ಯತ್ನಿಸಿದ ಮದ್ಯದ ರಸ್ತೆ ಯೋಜನೆಗೆ ತಡೆ ನೀಡಿದ್ದು ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತಿಗೆ ಆದೇಶಿಸಿರುವುದು ಹೊಸಕೆರೆ ಹಳ್ಳಿ ಜನತೆ ಪರವಾಗಿ ಉಪ ಮುಖ್ಯಮಂತ್ರಿಗಳು ಹಾಗೂ ಈಗಿನ ಸರ್ಕಾರಕ್ಕೆಮಾಡಿರುವ ಕೆಲಸಕ್ಕೆ ಜನತೆ ಸಂತಸ ವ್ಯಕ್ತ ಪಡಿಸಿದ್ದಾರೆ.