ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳು ಒಂದೊಂದಾಗಿ ಅನುಷ್ಠಾನಕ್ಕೆ ತರಲು ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಇದರ ಅಂಗವಾಗಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆಯಂತೆ ‘ಗೃಹಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ನೋಂದಾವಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆನ್ಲೈನ್ ಮೂಲಕ, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇದರ ನೋಂದಣಿ ಮಾಡಬಹುದಾಗಿದೆ.
ಗೃಹಜ್ಯೋತಿ ನೋಂದಣಿ ಸಂಪೂರ್ಣವಾಗಿ ಉಚಿತವಾಗಿದ್ದು, ಆದರೆ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಬೇಕಾಬಿಟ್ಟಿಯಾಗಿ ದರ ವಸೂಲಿ ಮಾಡುವಂತಿಲ್ಲ. ರೂಪಾಯಿ 20 ಕ್ಕಿಂತ ಹೆಚ್ಚು ಸಾರ್ವಜನಿಕರಿಂದ ವಸೂಲಿ ಮಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದೆ.
ಸೈಬರ್ ಸೆಂಟರ್ ಗಳು ನೋಂದಾವಣೆಗೆ ಜನರಿಂದ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಸೈಬರ್ ಸೆಂಟರ್ ಗಳು 20 ರೂಪಾಯಿ ಕ್ಕಿಂತ ಹೆಚ್ಚು ದರ ವಸೂಲಿ ಮಾಡಿದರೆ ಸಾರ್ವಜನಿಕರು ಸಹ 1912 ಸಹಾಯವಾಣಿಗೆ ಕರೆ ಮಾಡುವ ಮೂಲಕ ದೂರು ನೀಡಬಹುದು ಎಂದಿದೆ.
‘ಸ್ಪೆಷಲ್ ನ್ಯೂಸ್ ಮೀಡಿಯಾ’ ನಿನ್ನೆಯಷ್ಟೇ ಗೃಹಜ್ಯೋತಿ ಹೆಸರಿನಲ್ಲಿ ಸೈಬರ್ ಸೆಂಟರ್ ಗಳು ಸುಲಿಗೆಗೆ ಇಳಿದ ಬಗ್ಗೆ, ಸಾರ್ವಜನಿಕರಿಂದ ಒಂದೊಂದು ದರ ವಸೂಲಿ ಮಾಡುವ ಹಗಲು ದರೋಡೆ ಬಗ್ಗೆ ವಿಸ್ತೃತ ವರದಿ ಮಾಡಿತ್ತು ಎಂಬುದು ಗಮನಾರ್ಹ.