ಬಿಜೆಪಿಗೆ ಹೀನಾಯ ಸೋಲು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೀನಾಯ ಸೋಲು ಅನುಭವಿಸಿದ್ದರಿಂದ ಸೋಲಿನ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಸುದ್ಧಿಗೋಷ್ಠಿಯಲ್ಲಿಂದು ಈ ಬಗ್ಗೆ ಸ್ಪಷ್ಟನೆ ನೀಡಿದ ಕಟೀಲು ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ನನ್ನ ಅವಧಿ ಈಗಾಗಲೇ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.