ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023’ ಕ್ಕೆ ಒಪ್ಪಿಗೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕ ಪರ್ಯಾಲೋಚನೆ ಮಂಡಿಸಲಾಗಿದೆ.
ಸಚಿವ ಕೃಷ್ಣ ಭೈರೇಗೌಡ, ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್ ಅಸ್ತಿತ್ವದಲ್ಲಿರುವ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಭೂ ಬಳಕೆ ಪರಿವರ್ತನೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಮಹತ್ವದ ಅಂಶವುಳ್ಳ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023’ ಮಂಡಿಸಿದ್ದಾರೆ.
ರಾಜ್ಯ ಸರ್ಕಾರವು ಮಾಸ್ಟರ್ ಪ್ಲ್ಯಾನ್ ನಲ್ಲಿ ಯಾವ್ಯಾವ ಭೂಮಿ ಕೈಗಾರಿಕೆಗೆ, ಶಾಲೆ, ಉದ್ದಿಮೆ, ವಸತಿ ಹೀಗೆ ಯಾವ್ಯಾವ ಬಳಕೆಗೆ ಬಳಸಬೇಕು ಎಂಬುದನ್ನು ವರ್ಗೀಕರಿಸಿದೆ. ಹಳದಿ ವಲಯದಲ್ಲಿ ಬರುವ ಜಾಗದಲ್ಲಿ ಮತ್ತೆ ವಸತಿ ಬಳಕೆಗೆ ಭೂ ಪರಿವರ್ತನೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.