ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟವನ್ನು ತನ್ನ ತೆಕ್ಕೆಗೆ ಕಾಂಗ್ರೆಸ್ ತೆಗೆದುಕೊಂಡಿದ್ದು, ಕುತೂಹಲ ಮೂಡಿಸಿದ್ದ ಮಂಡ್ಯ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ.ಇಂದು ನಡೆದ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬೋರೇಗೌಡ ಅವರು ಗೆಲುವು ಸಾಧಿಸಿದ್ದು, ಓರ್ವ ಬಿಜೆಪಿ ಬೆಂಬಲಿತನ ನೆರವಿನಿಂದ ಅಧಿಕಾರ ಹಿಡಿವಲ್ಲಿ ಯಶಸ್ವಿಯಾಗಿದೆ.
ಮಂಡ್ಯದಲ್ಲಿ ಜೆಡಿಎಸ್ ಅಧಿಕಾರ ಕಳೆದುಕೊಂಡಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಮನ್ ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಗೆಲ್ಲಲು 9 ಮತಗಳು ಬೇಕಿತ್ತು. ಕಾಂಗ್ರೆಸ್, ತನ್ನ ಪಕ್ಷದ ನಿರ್ದೇಶಕರು, ಓರ್ವ ನಾಮ ನಿರ್ದೇಶಕ ಸದಸ್ಯ, ನಾಲ್ವರು ಅಧಿಕಾರಿಗಳ ಬೆಂಬಲದ ಜೊತೆಗೆ ಬಿಜೆಪಿ ಬೆಂಬಲಿತ ನೆರವಿನಿಂದ ಗೆದ್ದು ಬೀಗಿದೆ.
ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಪೈಪೋಟಿ ಶುರುವಾಗಿದ್ದು, ಎರಡು ಪಕ್ಷಗಳಿಗೂ ಬಿಜೆಪಿ ಬೆಂಬಲಿತರ ನಿರ್ದೇಶಕರ ಬೆಂಬಲ ಅನಿವಾರ್ಯವಾಗಿತ್ತು. ಆದ್ರೆ, ಅಂತಿಮವಾಗಿ ಬಿಜೆಪಿ ಬೆಂಬಲಿತ ನಿರ್ದೇಶಕ ಕಾಂಗ್ರೆಸ್ ಕೈ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.