ಲಿಂಗ ಪರಿವರ್ತನೆಗೆ ಶಸ್ತ್ರಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ.ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ.
ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೆಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಕಾನೂನು ಅಂಗೀಕಾರವಾದ ದಿನದಿಂದಲೇ ಜಾರಿಗೆ ಬರುತ್ತದೆ. ಈಗಾಗಲೇ ಲಿಂಗ ಬದಲಾಯಿಸಿಕೊಂಡಿರುವವರಿಗೆ ಈ ಕಾನೂನು ಅನ್ವಯವಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.
