ಸೌಜನ್ಯ ಮರ್ಡರ್ ; ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು’: ವಸಂತ ಬಂಗೇರ ಸ್ಟೋಟಕ ಹೇಳಿಕೆ

ಕರಾವಳಿ

ಬೆಳ್ತಂಗಡಿ ಸೌಜನ್ಯ ರೇಪ್ ಆಂಡ್ ಮರ್ಡರ್ ಪ್ರಕರಣಕ್ಕೆ ದಿನದಿಂದ ದಿನಕ್ಕೆ ವಿಚಿತ್ರ ತಿರುವುಗಳು ಒಂದೊಂದಾಗಿಯೇ ಬಯಲಿಗೆ ಬರುತ್ತಿದ್ದು, ಈ ಪ್ರಕರಣದಲ್ಲಿ ಪ್ರಭಾವೀಗಳ ಪಾತ್ರ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ,ಮಾಜಿ ಶಾಸಕ ವಸಂತ ಬಂಗೇರ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸೌಜನ್ಯ ಪ್ರಕರಣದ ಈ ರಹಸ್ಯವನ್ನು ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು ಎಂದು ಬಹಿರಂಗವಾಗಿ ಹೇಳಿದ್ದಾರೆ. “ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ ” ಆದರೆ, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು ಎಂದಿದ್ದಾರೆ.ನನ್ನನ್ನು ಕರೆದು ಹೇಳಿದರು ಇದನ್ನು ಪ್ರಸ್ತಾಪ ಮಾಡಬೇಡ … ಈ ಕೇಸನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ನಾನು ಸುಮಾರು ಒಂದೂ ಗಂಟೆಗೂ ಅಧಿಕ ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಿದೆ ಎಂದರು. ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಎನ್ನೋದು ನನಗೆ ತಿಳಿಯಿತು. ಅದನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಅದನ್ನು ಪ್ರಸ್ತಾಪಿಸಿಯೇ ಸಿದ್ದ. ಒಂದಲ್ಲ ಒಂದು ದಿನ ಅದನ್ನು ಹೇಳಲು ಕಾಲ ಬರುತ್ತದೆ ಎಂದು ಆಕ್ರೋಶ ಹೊರಹಾಕಿದರು. ಅವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು ..ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ಅವರು ನನ್ನನ್ನು ಸಾಯಿಸಿದ್ರು ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಶತಃಸಿದ್ದ ಎಂದು ಹೇಳಿದರು.

ಸಿದ್ದರಾಮಯ್ಯನವರನ್ನು ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕೆಂಬುದನ್ನು ವಿವರಿಸಿ ಹೇಳುತ್ತೇನೆ.ಇದನ್ನು ಈ ರೀತಿ ತನಿಖೆ ಮಾಡಬೇಕು.ಇಂತಹವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನೂ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಸೌಜನ್ಯ ಕುಟುಂಬಸ್ಥರನ್ನು ಮುಖ್ಯಮಂತ್ರಿಗಳ ಬಳಿ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು.ಬಂಗೇರರ ಹೇಳಿಕೆ ಇದೀಗ ರಾಜ್ಯಾಧ್ಯಂತ ಬಾರಿ ಚರ್ಚೆಯ ವಿಷಯವಾಗಿದೆ.