ವರ್ಷಾಂತ್ಯದಲ್ಲಿ ನಡೆಯಲಿರುವ ಛತೀಸ್ ಘಡ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಭೇರಿ ಸಾಧಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ. “ಎಬಿಪಿ” ಸುದ್ದಿವಾಹಿನಿ “ಸಿ ವೋಟರ್’ ಸಂಸ್ಥೆ ಜತೆಗೆ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ 48ರಿಂದ 54 ಸ್ಥಾನಗಳು ಲಭಿಸುವ ಸಾಧ್ಯತೆಗಳು ಇವೆ.
ಕಾಂಗ್ರೆಸ್‌ಗೆ ಸರಳ ಬಹುಮತಕ್ಕಿಂತ ಹೆಚ್ಚು ಸ್ಥಾನಗಳು ಲಭಿಸಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಬಿಜೆಪಿಗೆ 35ರಿಂದ 41, ಇತರರಿಗೆ 4 ಸ್ಥಾನಗಳ ವರೆಗೆ ಲಭಿಸುವ ಸಾಧ್ಯತೆ ಇದೆ. ಆ ರಾಜ್ಯದ ವಿಧಾನಸಭೆಯ ಒಟ್ಟು ಸ್ಥಾನಗಳು 90.