ಬಜ್ಪೆ ಕಳವಾರು ಎಂಬಲ್ಲಿ ಯುವಕನಿಗೆ ಚೂರಿ ಇರಿತ

ಕರಾವಳಿ

ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಕಳವಾರು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ವರದಿಯಾಗಿದೆ.

ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಚೂರಿ ಇರಿತಕ್ಕೆ ಒಳಗಾದ ಯುವಕ ಎಂದು ತಿಳಿದು ಬಂದಿದೆ.

ಚೂರಿ ಇರಿತಕ್ಕೊಳಗಾದ ಯುವಕನ್ನು ಬಜ್ಪೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳವಾರು ಭಾಗದಲ್ಲಿ ಗಾಂಜಾ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಮಲು ಪದಾರ್ಥಕ್ಕೆ ಸಿಲುಕಿ ಈ ಭಾಗದಲ್ಲಿ ಯುವಕರು ಸಮಾಜದ್ರೋಹಿ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಗಾಂಜಾ ವ್ಯಸನಿಯೋರ್ವ ಅನ್ಯ ಧರ್ಮಿಯರಿಗೆ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದಾರೆ. ಹಲ್ಲೆ ಘಟನೆಯ ಸಂಬಂಧ ಸುರತ್ಕಲ್‌ ಪೊಲೀಸರು ಕಳವಾರು ಭಾಗದಲ್ಲಿ ಮೊಕ್ಕಾಂ ಹೂಡಿದ್ದರು ಎನ್ನಲಾಗಿದ್ದು, ಆದರೆ ಇಂದು ಪೊಲೀಸರು ಸ್ಥಳದಿಂದ ತೆರಳಿದ್ದರಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಾಂಜಾ, ಅಮಲು ದಂಧೆಯನ್ನು ಪೊಲೀಸರು ಮಟ್ಟ ಹಾಕದಿದ್ದರೆ ಈ ಭಾಗದಲ್ಲಿ ಇನ್ನಷ್ಟು ಅನಾಹುತ ನಡೆಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.