ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಹಲವಾರು ಕ್ರಮಗಳನ್ನು ಅಳವಡಿಸಿಕೊಂಡ ನಂತರ, ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸಾವಿನ ಸಂಖ್ಯೆ 29 ಆಗಿತ್ತು, ಇದು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಸಾವು-ನೋವುಗಳನ್ನು ಕಡಿಮೆ ಮಾಡಲು ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಸಾವಿನ ಸಂಖ್ಯೆ ಮೇ ತಿಂಗಳಲ್ಲಿ 29, ಜೂನ್‌ನಲ್ಲಿ 28, ಜುಲೈನಲ್ಲಿ 8 ಮತ್ತು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯನ್ನು ಕಳೆದ ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿಯವರು ಅಧಿಕೃತವಾಗಿ ಉದ್ಘಾಟಿಸಿದಾಗಿನಿಂದ, ಅಪಘಾತಗಳ ಸಂಖ್ಯೆ ಹೆಚ್ಚಾಗಿತ್ತು ಮತ್ತು ಅನೇಕ ಪ್ರಯಾಣಿಕರು ಹೆದ್ದಾರಿಯಲ್ಲಿ ಸಾವಿಗೀಡಾಗಿದ್ದರು. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಪೊಲೀಸ್ ಅಧಿಕಾರಿಗಳು ಜೂನ್‌ನಲ್ಲಿ ಈ ಯೋಜನೆಯನ್ನು ಪರಿಶೀಲಿಸಿದರು ಮತ್ತು ಅಪಘಾತಗಳನ್ನು ತಡೆಯಲು ಹಲವಾರು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರು.