ಮೂಡಬಿದ್ರೆ ಬೆಳುವಾಯಿ ಗ್ರಾಮದ ಕಾಂತಾವರ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ದ್ವಿಚಕ್ರ ವಾಹನದಲ್ಲಿಟ್ಟು, ನಿಷೇಧಿತ ಡ್ರಗ್ಸ್ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರ ತಂಡವನ್ನು ಮೂಡಬಿದ್ರಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರ ನೇತ್ರತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮೂಡಬಿದ್ರೆ ಬೆಳುವಾಯಿ ಗ್ರಾಮದ ನಿವಾಸಿಗಳಾದ, ಮಹಮ್ಮದ್ ಅಯಾನ್,ಪರ್ಹಾನ್ ಖಾನ್, ಮಹಮ್ಮದ್ ಜುಬೈರ್ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ 800 ಗ್ರಾಂ. ತೂಕದ ನಿಷೇದಿತ ಗಾಂಜಾ,ಕೃತ್ಯಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಂತೆ, ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ ಹಾಗೂ ಮೂಡಬಿದ್ರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬಾಗವಹಿಸಿದ್ದರು.