ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6ಮಂದಿಯನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ. ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಅವರ ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.ಪಚ್ಚಂಬಳ ರವಿಯು ಕಾಸರಗೋಡಿನ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ ಎನ್ನಲಾಗಿದೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.