ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ; ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವೆಂಕಟೇಶ್ ಪ್ರಸನ್ನ ನೇಮಕ

ರಾಜ್ಯ

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವೆಂಕಟೇಶ್ ಪ್ರಸನ್ನ ರವರನ್ನು ಪೊಲೀಸ್ ಅಧೀಕ್ಷಕರು ಗುಪ್ತ ವಾರ್ತೆಯಿಂದ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗಿದೆ. ಯು.ಡಿ. ಕೃಷ್ಣಕುಮಾರ್ ಡಿವೈಎಸ್​ಪಿ, ಬಿಡಿಎ ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್​ಇ, ಮೈಸೂರು ಸೇರಿದಂತೆ ಒಟ್ಟು 33 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಂಪಂಗಿರಾಮನಗರ ಪೊಲೀಸ್​ ಠಾಣೆ ಇನ್ಸ್​ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಜಿ ಹೂಗಾರ್. ಕಾಟನ್​ಪೇಟೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್​ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಸಂತೋಷ್ ಕೆ, ಜಯನಗರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.