ಸರ್ಕಾರದ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡೋದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ರಾಜ್ಯ

ರಾಜ್ಯ ಸರ್ಕಾರದ ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡೋದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾಷ್ಟ್ರಕವಿ ಕುವೆಂಪು ರಚಿತ ಜಯಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅರೆ ಸರ್ಕಾರಿ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಆರಂಭದಲ್ಲಿ ಹಾಡಬೇಕು ಎಂಬುದಾಗಿ ಆದೇಶ ಹೊರಡಿಸಿದೆ.

ಜನವರಿ.7ರಂದು ಹೊರಡಿಸಿದ್ದ ಸರ್ಕಾರಿ ಆದೇಶದಲ್ಲಿ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಎಲ್ಲಾ ಸಾಂಸ್ಕೃತಿಕ, ಸಾಹಿತ್ಯಕ, ಇತರೆ ಅಧಿಕೃತ ಕಾರ್ಯಕ್ರಮಗಳಲ್ಲಿ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ ತಿಳಿಸಿದ್ದಾರೆ.