ಅಹಿಂದ ನಾಯಕರಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಪದ್ಮನಾಭ ನರಿಂಗಾನ ಇಂದು ಹೃದಯಾಘಾತ ದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಅಹಿಂದ ಜಿಲ್ಲಾಧ್ಯಕ್ಷರಾಗಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಮುಂಚೂಣಿ ನಾಯಕತ್ವ ವಹಿಸಿಕೊಂಡಿದ್ದರು. ಸಾಮಾಜಿಕ ಸೇವೆ ರಂಗದಲ್ಲೂ ಗುರುತಿಸಿಕೊಂಡಿದ್ದರು. ದಲಿತ ನಾಯಕರಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದರು. ಕಳೆದ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ನರಿಂಗಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.
