ಜನ್ಮದಾತನೇ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರ ನಾಲ್ಕು ವರ್ಷಗಳ ಕಾಲ ಅತ್ಯಾಚಾರ ಎಸಗಿ ಇದೀಗ ಬಾಲಕಿ ಗರ್ಭಿಣಿಯಾಗಿರುವ ಹೇಯ ಕೃತ್ಯ ಮುಂಬೈನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಂತ್ರಸ್ತೆ ಬಾಲಕಿಯ ಹೇಳಿಕೆ ಪ್ರಕಾರ, 2020 ರಿಂದ 2023ರ ನಡುವೆ ತನ್ನ ತಾಯಿ ಕೆಲಸಕ್ಕಾಗಿ ಹೊರಗಡೆ ಹೋದಾಗ ತಂದೆ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಿದ್ದಾಳೆ. ಬಾಲಕಿಯನ್ನು ವೈದ್ಯರನ್ನು ಭೇಟಿ ಮಾಡಿದ ಬಳಿಕ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿಸಿದ್ದಾರೆ.
ಈ ಸಂಬಂಧ ಬಾಲಕಿ ಮತ್ತು ತಾಯಿ, ತಂದೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
