ಖಾಸಗಿ ಆಸ್ಪತ್ರೆಗಳು ಸಾರ್ವಜನಿಕರಿಗೆ, ರೋಗಿಗಳಿಗೆ ಕಾಣುವ ರೀತಿಯಲ್ಲಿ ದರ ಪಟ್ಟಿ ಪ್ರಕಟಿಸುವುದು ಕಡ್ಡಾಯ: ಆರೋಗ್ಯ ಸಚಿವರು

ರಾಜ್ಯ

ಖಾಸಗಿ ಆಸ್ಪತ್ರೆಗಳು ಸಾರ್ವಜನಿಕರು ಅಥವಾ ರೋಗಿಗಳಿಗೆ ಕಾಣುವ ರೀತಿಯಲ್ಲಿ ಹೊರಭಾಗದಲ್ಲಿ ದರ ಪಟ್ಟಿ ಪ್ರಕಟಿಸುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆದೇಶ ಪಾಲನೆ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಸೀಜ್ ಮಾಡುವ ಬಗ್ಗೆಯೂ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈಗಾಗಲೇ ಯಾವ ಚಿಕಿತ್ಸೆಗೆ ಎಷ್ಟು ದರ ಎಂಬುದು ನಿಗದಿಯಾಗಿದೆ. ಅದರ ಬಗ್ಗೆ ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕರಿಗೆ ತೋರುವ ರೀತಿಯಲ್ಲಿ ಬೋರ್ಡ್ ಹಾಕಬೇಕು ಎಂದು ನಿರ್ದೇಶನ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.