ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆಯಲ್ಲಿರುವ ಬಿಜೆಪಿ; ಫೆಬ್ರವರಿ 29ರಂದು ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ, ರಾಜ್ಯದ ಹಾಲಿ ಸಂಸದರಿಗೆ ಟಿಕೆಟ್

ಕರಾವಳಿ

ದ.ಕ ಜಿಲ್ಲೆಯಿಂದ ಬಹುತೇಕ ಹಾಲಿ ಸಂಸದ ಕಟೀಲು.!

ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದು, ಫೆಬ್ರವರಿ 29ರಂದು ಪ್ರಕಟಗೊಳ್ಳಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಜ್ಯದ 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ. ಫೆಬ್ರವರಿ 29ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದು ಪಕ್ಷವು ಸುಮಾರು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಸೇರಿದಂತೆ ಅಂದಾಜು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಾಲಿ 10ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ.

ಬಿ.ವೈ.ರಾಘವೇಂದ್ರ, ಪ್ರತಾಪ್ ಸಿಂಹ, ಎ.ನಾರಾಯಣಸ್ವಾಮಿ, ಉಮೇಶ್ ಜಾಧವ್, ಜೋಷಿ, ಶ್ರೀರಾಮುಲು, ಅಮರೇಶ್ ನಾಯಕ್, ಅನಂತಕುಮಾರ್ ಹೆಗಡೆ, ನಳೀನ್‍ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಅಣ್ಣಾ ಸಾಹೇಬ್ ಜೊಲ್ಲೆ ಇವರುಗಳ ಹೆಸರು ಮೊದಲ ಪಟ್ಟಿಯಲ್ಲೇ ಘೋಷಣೆಯಾಗುವ ಸಂಭವವಿದೆ ಎನ್ನಲಾಗಿದೆ. 29ರಂದು ನಡೆಯಲಿರುವ ಚುನಾವಣಾ ಸಮಿತಿ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್ ಭಾಗವಹಿಸಲಿದ್ದಾರೆ.