ನಡೆದುಕೊಂಡು ಹೋಗುತ್ತಿದ್ದ ವಿವಾಹಿತ ಮಹಿಳೆಗೆ ಚುಡಾಯಿಸಿದ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಚಪ್ಪಲಿ ಪೂಜೆ ನಡೆಸಿದ ಪ್ರಕರಣ ಬಂಟ್ವಾಳದ ಮಾಣಿಯಲ್ಲಿ ನಡೆದಿದೆ. ಆರೋಪಿಯನ್ನು ಸೂರಿಕುಮೇರು- ಬೊರಿಮಾರು ಸಮೀಪದ, ಮಾಣಿ ಗ್ರಾಮದ ಲಕ್ಕಪ್ಪರ ಕೋಡಿ ನಿವಾಸಿ ಸ್ಟೀವನ್ ಆಲ್ವಿನ್ ಪಾಯಸ್ ಎಂದು ಗುರುತಿಸಲಾಗಿದ್ದು ಈತನ ವಿರುದ್ಧ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಮಾರ್ಚ್ 4ರಂದು ಈ ಘಟನೆ ನಡೆದಿದ್ದು, ಮಹಿಳೆಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಸೂರಿಕುಮೇರು- ಬೊರಿಮಾರು ಆಲ್ವಿನ್ ಸ್ಟೀವನ್ ಪಾಯಸ್ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೇ ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ವೇಳೆ ಕೋಪಗೊಂಡ ಮಹಿಳೆ ಆತನಿಗೆ ನಡುರಸ್ತೆಯಲ್ಲೇ ಚಪ್ಪಲಿಯಿಂದ ಥಳಿಸಿದ್ದಾರೆ. ಮಹಿಳೆ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿ ಸ್ಟೀವನ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.
