2023ರ ನವೆಂಬರ್ ಮತ್ತು 2025ರ ಫೆಬ್ರವರಿಯಲ್ಲಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ ಇನ್ನು ಮುಂದೆ ಅದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ. ಮೇ 31ರ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಲು ಇಲಾಖೆ ಆದೇಶ ನೀಡಿದ್ದು, ನಂತರವೂ ಅಳವಡಿಸದೆ ಇದ್ದರೆ ದಂಡ ವಿಧಿಸಲಿದೆ.
2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವುದನ್ನು ಕಡ್ಡಾಯಗೊಳಿ ಸಾರಿಗೆ ಇಲಾಖೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಸಾರಿಗೆ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಸುಮಾರು ಎರಡು ಕೋಟಿ ವಾಹನಗಳು ಎಚ್‌ಎಸ್ ಆರ್‌ಪಿ ಪಡೆಯಬೇಕಾಗಿದೆ. ಈವರೆಗೆ ರಾಜ್ಯದಲ್ಲಿ ಕೇವಲ 34 ಲಕ್ಷ ಎಚ್‌ಎಸ್‌ಆರ್‌ಪಿ ನೋಂದಾಯಿಸಲಾಗಿದೆ. ಗಡುವನ್ನು ಎರಡು ಬಾರಿ ವಿಸ್ತರಿಸಿದ್ದರೂ ಸಹ ಕಡಿಮೆ ಪ್ರಮಾಣದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ.
ಫೆಬ್ರವರಿ ವೇಳೆಗೆ ಸುಮಾರು 18 ಲಕ್ಷ ನೊಂದಣಿಯಾಗಿದ್ದರೆ ಏಪ್ರಿಲ್ ವೇಳೆಗೆ ಈ ಸಂಖ್ಯೆ ದುಪ್ಪಟ್ಟಾಗಿದೆ. ಆದರೆ, ಇನ್ನೂ ಹೆಚ್ಚಿನ ಸಂಖ್ಯೆಯ ವಾಹನಗಳು ಎಚ್‌ಎಸ್‌ಆರ್‌ಪಿ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂದು ಸಾರಿಗೆ ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ.
ಮೇ 31 ರವರೆಗೆ ಕಾಯುತ್ತೇವೆ. ಎಚ್‌ಎಸ್‌ಆರ್‌ಪಿ ನೋಂದಣಿ 75 ಲಕ್ಷ ದಾಟುವ ನಿರೀಕ್ಷೆಯಿದೆ. ಅದರ ನಂತರ ಗಡುವು ವಿಸ್ತರಿಸಬೇಕೇ ಎಂಬುದನ್ನು ನಾವು ಆಮೇಲೆ ಪರಿಗಣಿಸುತ್ತೇವೆ. ಸದ್ಯ ಜನರು ನಂಬರ್ ಪ್ಲೇಟ್ ಅಳವಡಿಕೆಗೆ ಮುಗಿಬೀಳುತ್ತಿದ್ದಾರೆ ಎಂಬುದು ಈಗಿನ ಅಂಕಿಸಂಖ್ಯೆಗಳಿಂದ ತಿಳಿದುಬಂದಿದೆ. ಹೀಗಾಗಿ ಇನ್ನೂ ಸ್ವಲ್ಪ ಸಮಯ ನೀಡಿದರೆ ಎಲ್ಲರೂ ಅದನ್ನು ಪೂರ್ಣಗೊಳಿಸಬಹುದು ಎಂದು ಹೇಳಿದ್ದಾರೆ. ಗಡುವಿನ ಮೊದಲು ನಂಬರ್ ಪ್ಲೇಟ್ ಅಳವಡಿಸದವರಿಗೆ, ಅವಧಿ ವಿಸ್ತರಿಸದಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಎಚ್‌ಎಸ್‌ಆರ್‌ಪಿ ಅಳವಡಿಸದವರಿಗೆ picಮೊದಲ ಬಾರಿಗೆ 500 ರೂ. ದಂಡ ತೆತ್ತ ನಂತರವೂ ಎಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ 1,000 ರೂ. ದಂಡ ವಿಧಿಸಲಾಗುವುದು.
