ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜ್ಯ ಹೈಕೋರ್ಟ್ ಆದೇಶದಂತೆ ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಳಿಯ ನಮೂನೆ ನಂ.4 ನ್ನು ಅಂಗೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ. ಈವರೆಗೆ ಮಾದರಿ ನಿಯಮಾವಳಿಯನ್ನು ಅಂಗೀಕರಿಸಿಕೊಳ್ಳದ ವಕ್ಫ್ ಸಂಸ್ಥೆಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಯ ಮೂಲಕ ರಾಜ್ಯ ವಕ್ಫ್ ಮಂಡಳಿಯ ಅಂಗೀಕಾರಕ್ಕಾಗಿ ಕೂಡಲೇ ಸಲ್ಲಿಸಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿಗಳು ತಿಳಿಸಿದ್ದಾರೆ.
