ಆಂಧ್ರ ಪ್ರದೇಶ: ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿರುವ ಟಿಡಿಪಿ ಇದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಸ್ಪೀಕರ್ ಹುದ್ದೆಯೂ ಸೇರಿದಂತೆ ಮಹತ್ವದ 5 ಸಂಪುಟ ಖಾತೆಗಳಿಗಾಗಿ ಬೇಡಿಕೆ ಇರಿಸುವ ಬಹುತೇಕ ಸಾಧ್ಯತೆಗಳಿವೆ. 16 ಸಂಸದರನ್ನು ಹೊಂದಿರುವ ಟಿಡಿಪಿ ಎನ್‌ಡಿಎಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿದೆ.
ಮೂರನೇ ಅವಧಿಯ ಮೋದಿ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಲು ದೃಢವಾದ ನಿಲುವನ್ನು ತೆಗೆದುಕೊಂಡಿರುವ ನಾಯ್ಡು, ಬಿಜೆಪಿ ಮುಖಂಡರಿಗೆ ಬೇಡಿಕೆಗಳ ಪಟ್ಟಿಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಇವುಗಳಲ್ಲಿ ಲೋಕಸಭಾ ಸ್ಪೀಕರ್ ಹುದ್ದೆ ಮತ್ತು ಪ್ರಾದೇಶಿಕ ಪಕ್ಷಕ್ಕೆ ಕನಿಷ್ಠ ಐದು ಖಾತೆಗಳನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸ್ಪೀಕರ್ ಹುದ್ದೆಗೆ ಟಿಡಿಪಿ ನಾಯಕರ ಏಕೆ ಬೇಡಿಕೆ ಬಹಳ ಮಹತ್ವವಿದೆ. ಕಾರಣ ಭವಿಷ್ಯದಲ್ಲಿ ಪಕ್ಷಾಂತರವಾಗುವಂತಹ ಸಂದರ್ಭ ಬಂದಲ್ಲಿ ಸ್ಪೀಕರ್ ಪಾತ್ರವೂ ನಿರ್ಣಾಯಕವಾಗಿರುತ್ತದೆ. ಅಲ್ಲದೇ ಭವಿಷ್ಯದಲ್ಲಿ ಸಮ್ಮಿಶ್ರ ಸರ್ಕಾರವೂ ರಚನೆ ಆಗುವ ಸಾಧ್ಯತೆ ಇರುತ್ತದೆ. ಈ ವೇಳೆ ಪಕ್ಷಾಂತರಗೊಂಡವರ ಅಮಾನತು ಮಾಡುವ ಅರ್ಹತೆಯನ್ನು ರದ್ದು ಮಾಡುವ ಅವಕಾಶ ಸ್ಪೀಕರ್‌ಗೆ ಇರುತ್ತದೆ. ಇದೇ ಕಾರಣಕ್ಕೆ ಲೋಕಸಭೆಯ ಸ್ಪೀಕರ್ ಹುದ್ದೆ ಮೇಲೆ ಚಂದ್ರಬಾಬು ನಾಯ್ಡು ಭಾರಿ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ.
