ಅಕ್ರಮ ದನ ಸಾಗಾಟ; ವಾಹನ ಸಮೇತ 8 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಬಜಪೆ ಪೊಲೀಸರು

ಕರಾವಳಿ

ಬಜಪೆ ಶಾಂತಿಗುಡ್ಡೆ ಚೆಕ್ ಪೋಸ್ಟ್ ಬಳಿ ಬಜಪೆ ಕಡೆಯಿಂದ ಇಬ್ಬರು ವ್ಯಕ್ತಿಗಳು ಬಿಳಿ ಬಣ್ಣದ ಗೂಡ್ಸ್ ವಾಹನದಲ್ಲಿ ದನಗಳನ್ನು ತುಂಬಿಸಿ, ಜೋಕಟ್ಟೆ-ಶಾಂತಿಗುಡ್ಡೆ ಮಾರ್ಗವಾಗಿ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ ಆರೋಪಿಗಳು ವಾಹನವನ್ನು ಬಿಟ್ಟು ಓಡಿ ಹೋಗಿದ್ದು, ಪೊಲೀಸರು ಆರೋಪಿತರನ್ನು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದಾಗ ಪಕ್ಕದಲ್ಲಿದ್ದ ಗುಡ್ಡೆಯಲ್ಲಿ ತಪ್ಪಿಸಿಕೊಂಡಿರುತ್ತಾರೆ.

ವಾಹನದಲ್ಲಿದ್ದ 7 ದನಗಳನ್ನು, 2 ಕೋಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ KA-51 AJ 6770 ಸಂಖ್ಯೆಯ ಮಿನಿ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 8 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ದನ ಹಾಗೂ ಕೋಣಗಳನ್ನು ಎಲ್ಲಿಂದಲೋ ಕಳವು ಮಾಡಿ, ಅವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಮಿನಿ ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಆಪಾಧಿತರ ವಿರುದ್ದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ಆರೋಪಿತರ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿರುತ್ತದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರ ಮಾರ್ಗದರ್ಶನದಂತೆ, DCP ಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ACP ಮನೋಜ್ ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಶ್ರೀ ನಂದೀಶ್ವರ ಬಿ ಕುಂಬಾರ್ ರವರ ನೇತೃತ್ವದಲ್ಲಿ ಪಿ.ಎಸ್.ಐ ರೇವಣಸಿದ್ದಪ್ಪ, ASI ರಾಮ ಪೂಜಾರಿ, ಸುಜನ್, ರಶೀದ ಶೇಖ್, ಚಿನ್ನಪ್ಪ, ಮಂಜುನಾಥ, ದೇವಪ್ಪ, ಬಸವರಾಜ್ ಪಾಟೀಲ್, ಅನಿಲ್ ಕುಮಾರ್, ಮಧೂ, ಮಧು ಮೂಡಿಗೇರೆ, ಪ್ರಕಾಶ್, ವಿರೂಪಾಕ್ಷ, ರಮೇಶ್, ಚೇತನ್ ಮಾಳಿ, ವಿರೇಶ್, ಭರಮಪ್ಪ ಮತ್ತು ಇತರ ಸಿಬ್ಬಂದಿಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.