ಷೇರು ಮಾರುಕಟ್ಟೆಯಿಂದ ಒಂದೇ ದಿನ 30 ಲಕ್ಷ ಕೋಟಿ ರೂಪಾಯಿ ಹಗರಣ; ರಾಹುಲ್ ಗಾಂಧಿ ಗಂಭೀರ ಆರೋಪ

ರಾಷ್ಟ್ರೀಯ

ಬಿಜೆಪಿಯವರು ಯಾವ ಆಧಾರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಲಹೆ ನೀಡಿದರು.?

ಷೇರು ಮಾರುಕಟ್ಟೆಯಿಂದ ಒಂದೇ ದಿನ 30 ಲಕ್ಷ ಕೋಟಿ ರೂಪಾಯಿ ಹಗರಣವಾಗಿದ್ದು, ಇದರಿಂದ ಸಾಮಾನ್ಯ ಜನರು ಬಹುದೊಡ್ಡ ನಷ್ಟ ಅನುಭವಿಸಿದ್ದಾರೆ ಎಂದು ನೂತನ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯವರು ಸ್ಟಾಕ್ ಮಾರ್ಕೆಟ್ ಬಗ್ಗೆ ಮಾತನಾಡಿ ಷೇರು ಮಾರುಕಟ್ಟೆ ಮೇಲೇರಲಿದೆ ಎಂದಿದ್ದರು.

ಆದರೆ ಜೂ.4ರಂದು ಲೋಕಸಭೆ ಚುನಾವಣೆಯ ಫಲಿತಾಂಶದಂದು ಸ್ಟಾಕ್ ಮಾರ್ಕೆಟ್ ದಾಖಲೆ ಮಟ್ಟದಲ್ಲಿ ಕುಸಿತವಾಗಿದೆ. ಅಂದೇ ದೊಡ್ಡ ಹಗರಣ ನಡೆದಿದೆ. ಬಿಜೆಪಿಯವರು ಯಾವ ಆಧಾರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಲಹೆ ನೀಡಿದರು ಎಂದು ರಾಹುಲ್ ಗಾಂಧಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದಲ್ಲದೇ ಚುನಾವಣೋತ್ತರ ಸಮೀಕ್ಷೆ ಪ್ರಕಟ ಮಾಡಲಾಗಿತ್ತು. ಅದಾಗ್ಯೂ ಸುಳ್ಳು ಸಮೀಕ್ಷೆ ನೀಡಲಾಗಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಂಸತ್ತಿನ ಜಂಟಿ ಸಮಿತಿಯಿಂದ ತನಿಖೆಯಾಗಬೇಕು ಎಂದೂ ಆಗ್ರಹಿಸಿದ್ದಾರೆ.