ಬಜಪೆ: ಮನೆಗೆ ಕನ್ನ ಹಾಕಿ ಕಳವು ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪತ್ತೆ ಮಾಡಿದ ಪೊಲೀಸರು

ಕರಾವಳಿ

ಬಜಪೆ ಠಾಣಾ ವ್ಯಾಪ್ತಿಯ ಬಜಪೆ, ಪೆರ್ಮುದೆ, ಕೈಕಂಬ, ಸೂರಲ್ಪಾಡಿ, ಕಂದಾವರ ಮುಂತಾದ ಕಡೆಗಳಲ್ಲಿ ಸಣ್ಣ ಪುಟ್ಟ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಪತ್ತೆಮಾಡಿ, ಅವರಿಂದ ಕಳವು ಮಾಡಿದ್ದ ಪಲ್ಸರ್ ಬೈಕ್-1 ಹಾಗೂ ಪೆರ್ಮುದೆಯ ಮನೆಯಲ್ಲಿ ಕಳ್ಳತನ ಮಾಡಿದ್ದ 30,000 ರೂಪಾಯಿ ಮೌಲ್ಯದ ಬೆಳ್ಳಿಯ ವಸ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಬಾಲ ನ್ಯಾಯ ಮಂಡಳಿಯ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ.

ಕಳವು ಮಾಡಿದವರ ಪತ್ತೆ ಕಾರ್ಯದಲ್ಲಿ ಬಜಪೆ ಪೊಲೀಸ್ ಠಾಣೆಯ ನಿರೀಕ್ಷಕರಾದ ನಂದೇಶ್ ಬಿ ಕುಂಬಾರ್ ರವರ ನೇತೃತ್ವದ ತಂಡ ಯಶಸ್ವಿಯಾಗಿದೆ.