ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಜೂನ್ 26ಕ್ಕೆ

ರಾಷ್ಟ್ರೀಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಮಂಗಳವಾರ ಜೂನ್ 26ಕ್ಕೆ ಮುಂದೂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅರ್ಜಿದಾರರ ಪರ ವಕೀಲರಾದ ಸಂತೋಷ್ ಕುಮಾರ್ ಪಾಂಡೆ ಅವರು, ಮಂಗಳವಾರದಂದು ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿರುವ ಕಾರಣ ಜೂನ್ 26 ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು.