HSRP ಸುರಕ್ಷಿತ ನೋಂದಣಿ ಫಲಕ ಅಳವಡಿಕೆಯ ಅಂತಿಮ ಗಡುವನ್ನು ಸೆ. 15ರ ವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.
ಈಗಾಗಲೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಂಬಂಧಿಸಿ ಹಲವು ಬಾರಿ ಕಾಲಾವಕಾಶ ವಿಸ್ತರಿಸಲಾಗಿದೆ.
ನ್ಯಾಯಾಲಯ ಕೂಡ ಜು. 4ರ ವರೆಗೆ ಯಾವುದೇ ಒತ್ತಡ ಹೇರುವಂತಿಲ್ಲ ಎಂದು ಸೂಚಿಸಿತ್ತು. ಇದೆಲ್ಲದರ ಹಿನ್ನೆಲೆಯಲ್ಲಿ ವಾಹನ ಮಾಲಕರಿಗೆ ಸೆ. 15ರ ವರೆಗೆ ಅಂತಿಮ ಗಡುವು ನೀಡಲಾಗಿದೆ. ಸುಮಾರು ಎರಡು ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದ್ದು, ಇದುವರೆಗೆ ಶೇ. 25ರಷ್ಟು ವಾಹನ ಗಳು ಈ ವ್ಯವಸ್ಥೆಯನ್ನು ಹೊಂದಿವೆ ಎಂದು ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.