ಉಡುಪಿ: ಉಡುಪಿ ನಗರದ ಪ್ರಮುಖ ರಸ್ತೆಯಲ್ಲಿ ತಲವಾರ್ ದಾಳಿ ನಡೆಸಿ ಬಂಧಿತರಾಗಿರುವ ಗರುಡ ಗ್ಯಾಂಗ್ ನ ಆರೋಪಿಗಳು ಜೈಲು ಅಧಿಕಾರಿ ಹಾಗೂ ಸಿಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಜಿಲ್ಲಾ ಕಾರಾಗೃಹ ಅಧೀಕ್ಷಕ, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಕರೆ ಮಾಡಲು ತಡವಾಯಿತೆಂದು ಜೈಲರ್ ಎಸ್.ಎ.ಶಿರೋಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಗಳನ್ನು ತಳ್ಳಿ ಕೊಠಡಿಯಲ್ಲಿದ್ದ ಕುರ್ಚಿಯಿಂದ ಹಾಗೂ ಅಡುಗೆ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
