ಎಫ್‌ಐಆರ್‌ ದಾಖಲಾಗುವ ಮುನ್ನವೇ ಕೇಂದ್ರ ಗೃಹ ಇಲಾಖೆಯಿಂದ ಬಂದಿದ್ದ ಪತ್ರ; ಯೆಡಿಯೂರಪ್ಪ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲು ಸೂಚಿನೆ

ರಾಷ್ಟ್ರೀಯ

ಲೈಂಗಿಕ ದರ್ಜನ್ಯ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪರವರನ್ನು ಬಂಧಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಡ ಹೇರಿದ್ದರು ಎಂಬ ಆರೋಪ ಕೇಳಿಬಂದಿದೆ. ನ್ಯೂಸ್‌ ಮಿನಿಟ್‌ ಎಂಬ ಸುದ್ದಿ ಸಂಸ್ಥೆಯೊಂದು ಈ ಕುರಿತು ವರದಿ ನೀಡಿದ್ದು, ಒಂದು ವಾರದ ಹಿಂದೆಯೇ ಕರ್ನಾಟಕ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದ್ದ ಕೇಂದ್ರ ಗೃಹ ಇಲಾಖೆ, ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ದ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ಕೇಳಿತ್ತು ಎಂದು ಹೇಳಿದೆ. ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ದ ಎಫ್‌ಐಆರ್‌ ದಾಖಲಾಗುವ ಮುನ್ನವೇ ಕೇಂದ್ರ ಗೃಹ ಇಲಾಖೆಯಿಂದ ಬಂದಿದ್ದ ಪತ್ರದಲ್ಲಿ ಪ್ರಕರಣದಲ್ಲಿ ಆರೋಪಿ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು ಎಂದು ವರದಿಯಾಗಿದೆ.

ಫೆ. 23 ರಂದು ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿ ಮೇಲೆ ಬಿಎಸ್‌ವೈ ಲೈಂಗಿಕ ಕಿರುಕುಳ ಎಸೆಗಿದ್ದಾರೆಂದು ಆರೋಪಿಸಿ ದೂರು ನೀಡಿ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಕರ್ನಾಟಕ ಪೊಲೀಸ್‌ ಇಲಾಖೆಗೆ ರವಾನಿಸಿದ್ದರು ಕಾನೂನು ವಿಭಾಗದ ಅಧಿಕಾರಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು. ಮಾರ್ಚ್ 17 ರಂದು ಯಡಿಯೂರಪ್ಪ ವಿರುದ್ದ ಲೈಂಗಿಕ ದರ್ಜನ್ಯ ಪ್ರಕರಣ ದಾಖಲಾಗಿತ್ತು.