ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ಕರಾವಳಿ

ರಾಜ್ಯ ಸರಕಾರ ಜುಲೈ 2 ರಂದು ಹಲವು ಪೊಲೀಸ್ ಅಧಿಕಾರಿಗಳನ್ನು(IPS) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.