ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು SSLC, PUCಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, SSLC, PUC ಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ.
ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.