ದಿನಾಂಕ 06-09-2024 ರಂದು ಸಂಜೆ ಕಿನ್ನಿಗೋಳಿಯ ರಾಮನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದು ಒದ್ದಾಡುತ್ತಿದ್ದ ತಾಯಿಯನ್ನು ಕೂಡಲೇ ಧಾವಿಸಿ ಬಂದು ತನ್ನ ಶಕ್ತಿಯನ್ನೆಲ್ಲ ಉಪಯೋಗಿಸಿ ರಿಕ್ಷಾ ಮೇಲಕ್ಕೆತ್ತಿ ರಕ್ಷಿಸಿದ ಬಾಲಕಿ ವೈಭವಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಸನ್ಮಾನಿಸಿದರು.

ಬಾಲಕಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಎಲ್ಲರೂ ಕೊಂಡಾಡಿದರು. ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದರು.
