ಹಲವು ವರ್ಷಗಳಿಂದ ಠಿಕಾಣಿ ಹೂಡಿರುವ ಪಿಡಿಓ, ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆ

ರಾಜ್ಯ

ಒಂದೇ ಗ್ರಾಮ ಪಂಚಾಯಿತ್ ಅಥವಾ ತಾಲ್ಲೂಕಿನಲ್ಲಿ ಸಚಿವರು, ಶಾಸಕರ ಶಿಫಾರಸು ಬಳಸಿಕೊಂಡು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಎಲ್ಲಾ ಪಿಡಿಒ, ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ.

ಗ್ರಾಮೀಣ ಪ್ರದೇಶದ ಆಡಳಿತದಲ್ಲಿ ತ್ವರಿತ ಸೇವೆ ಒದಗಿಸುವುದು, ಪಂಚಾಯಿತಿಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು, ಅಧಿಕಾರಿಗಳು ಮತ್ತು ಸಿಬ್ಬಂದಿಯ ದಕ್ಷತೆ ಹೆಚ್ಚಿಸುವ ಉದ್ದೇಶ ಇಟ್ಟುಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-1, ಕಾರ್ಯದರ್ಶಿ ಗ್ರೇಡ್‌-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಇದೇ ಮೊದಲ ಬಾರಿಗೆ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಜೂನ್‌ 25ರಂದು ಆದೇಶ ಹೊರಡಿಸಿತ್ತು.