ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

ರಾಷ್ಟ್ರೀಯ

ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿ, ತಿಲಕ್ ನಗರ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ.

ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತ್​ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿರುವ ಕೋರ್ಟ್ FIR ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಈ ಮುಂದಿನ ವಿಚಾರಣೆಯನ್ನು ಅ.10 ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.